ಸಿಯೋಲ್: ದಕ್ಷಿಣ ಕೊರಿಯಾದ ಉಲ್ಸಾನ್ ನಗರದಲ್ಲಿರುವ ಬೃಹತ್ ಅಪಾರ್ಟ್ಮೆಂಟ್ನಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.
ಹೊತ್ತಿ ಉರಿದ 33 ಅಂತಸ್ತಿನ ಬೃಹತ್ ಕಟ್ಟಡ: ಕನಿಷ್ಠ 88 ಮಂದಿಗೆ ಗಾಯ - 33 ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ಬೆಂಕಿ
ದಕ್ಷಿಣ ಕೊರಿಯಾದ ನಗರ ಉಲ್ಸಾನ್‌ನಲ್ಲಿ 33 ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಸುಮಾರು 88 ಮಂದಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ದೊರೆತಿದೆ.
ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೂರಾರು ನಿವಾಸಿಗಳನ್ನು ತಕ್ಷಣ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಕಟ್ಟಡದ ಮೇಲ್ಛಾವಣಿ ಮತ್ತು ಇತರೆ ಸ್ಥಳದಲ್ಲಿ ಸಿಲುಕಿಕೊಂಡಿದ್ದ 77 ಜನರನ್ನು ರಕ್ಷಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.
ಉಸಿರಾಟದ ತೊಂದರೆ ಮತ್ತು ಸಣ್ಣಪುಟ್ಟ ಗಾಯಗಳಿಗೆ ತುತ್ತಾದ ಕನಿಷ್ಠ 88 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ದಕ್ಷಿಣ ಕೊರಿಯಾದ ಆಂತರಿಕ ಮತ್ತು ಸುರಕ್ಷತಾ ಸಚಿವಾಲಯ ತಿಳಿಸಿದೆ. ಜೊತೆಗೆ, ಬೆಂಕಿಯ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 8 ರಿಂದ 12ನೇ ಅಂತಸ್ತಿನ ಮಧ್ಯೆ ಬೆಂಕಿ ಕಾಣಿಸಿಕೊಂಡಿರಬಹುದು ಎನ್ನಲಾಗಿದೆ. ಘಟನೆಯ ವೇಳೆ ಜೋರು ಗಾಳಿ ಬೀಸಿದ್ದರಿಂದ ಬೆಂಕಿ ವೇಗವಾಗಿ ಹರಡಿದೆ.