ಬೀಜಿಂಗ್(ಚೀನಾ):ಈಶಾನ್ಯ ಚೀನಾದ ವಸತಿ ಕಟ್ಟಡವೊಂದರಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 8 ಮಂದಿ ಸಾವನ್ನಪ್ಪಿದ್ದಾರೆಂದು ಅಲ್ಲಿನ ಸರ್ಕಾರಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಗ್ಯಾಸ್ ಸೋರಿಕೆಯಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಲಿಯಾನಿಂಗ್ ಪ್ರಾಂತ್ಯದ ಕರಾವಳಿ ನಗರವಾದ ಡಾಲಿಯಾನ್ನಲ್ಲಿ ಸ್ಫೋಟದಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ದುರಂತದಲ್ಲಿ ಐದು ಮಂದಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.