ಢಾಕಾ (ಬಾಂಗ್ಲಾದೇಶ): ಮಸೀದಿಯಲ್ಲಿನ ಗ್ಯಾಸ್ ಪೈಪ್ಲೈನ್ ಸ್ಫೋಟಗೊಂಡ ಪರಿಣಾಮ ಬಾಂಗ್ಲಾದೇಶದ ಮಸೀದಿವೊಂದರಲ್ಲಿ 11 ಮಂದಿ ದುರ್ಮರಣಕ್ಕೀಡಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಸೀದಿಯಲ್ಲಿ ಪ್ರಾರ್ಥನೆ ಮಾಡ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡಿರುವ ಕಾರಣ 11 ಮಂದಿ ಸಾವನ್ನಪ್ಪಿದ್ದು, ಹತ್ತಾರು ಜನರು ಗಾಯಗೊಂಡಿದ್ದಾರೆ. ಇದರಲ್ಲಿ ಅನೇಕರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಶುಕ್ರವಾರ ಸಂಜೆ ನಾರಾಯಣಗಜ್ನ ಬೈಟಸ್ ಸಲಾತ್ ಜೇಮ್ ಮಸೀದಿಯಲ್ಲಿ ನೂರಾರು ಜನರು ಪ್ರಾರ್ಥನೆ ಮಾಡಲು ತೆರಳಿದ್ದರು. ಪ್ರಾರ್ಥನೆ ಮುಗಿಯುತ್ತಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಠ 37 ಜನರಿಗೆ ಚಿಕಿತ್ಸೆ ನೀಡುತ್ತಿರುವ ದೃಶ್ಯ ಕಂಡು ಬಂದಿದ್ದು, ಇದರಲ್ಲಿ ಕೆಲವರು ಮಕ್ಕಳು ಸೇರಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ ಘಟನೆಯಲ್ಲಿ ಗಾಯಗೊಂಡಿರುವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಶುಕ್ರವಾರ ಸಂಜೆ ನಾರಾಯಣಗಜ್ನ ಬೈಟಸ್ ಸಲಾತ್ ಜೇಮ್ ಮಸೀದಿಯಲ್ಲಿ ನೂರಾರು ಜನರು ಪ್ರಾರ್ಥನೆ ಮಾಡಲು ತೆರಳಿದ್ದರು. ಪ್ರಾರ್ಥನೆ ಮುಗಿಯುತ್ತಿದ್ದಂತೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಕನಿಷ್ಠ 37 ಜನರಿಗೆ ಚಿಕಿತ್ಸೆ ನೀಡುತ್ತಿರುವ ದೃಶ್ಯ ಕಂಡು ಬಂದಿದ್ದು, ಇದರಲ್ಲಿ ಕೆಲವರು ಮಕ್ಕಳು ಸೇರಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜತೆಗೆ ಘಟನೆಯಲ್ಲಿ ಗಾಯಗೊಂಡಿರುವರಲ್ಲಿ ಹೆಚ್ಚಿನವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮಸೀದಿಯೊಳಗೆ ಅಳವಡಿಕೆ ಮಾಡಲಾಗಿದ್ದ ಆರು ಹವಾನಿಯಂತ್ರಕ ಬ್ಲಾಸ್ಟ್ ಆಗಿವೆ ಎಂದು ಅಲ್ಲಿನ ಮಾಧ್ಯಮಗಳಲ್ಲಿ ವರದಿಯಾಗಿದೆ.