ಢಾಕಾ: ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ಆಚರಣೆ ವೇಳೆ ಹಿಂದೂ ದೇವಾಲಯಗಳ ಮೇಲೆ ಕೆಲವು ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಗಲಭೆಯಲ್ಲಿ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದು, ದೇಶದ 22 ಜಿಲ್ಲೆಗಳಲ್ಲಿ ಅರೆಸೇನಾ ಪಡೆ ನಿಯೋಜಿಸಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಕುಮಿಲಾದ ಸ್ಥಳೀಯ ದೇವಸ್ಥಾನದಲ್ಲಿ ಗಲಭೆ ನಡೆದಿದೆ. ದೇವಾಲಯದ ಆಡಳಿತ ಮಂಡಳಿ ಮತ್ತು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ಹರಸಾಹಸಪಟ್ಟಿದ್ದಾರೆ.
ಕ್ಯುಮಿಲಾದಲ್ಲಿ ನಡೆದ ಘಟನೆ ಬಳಿಕ ಚಂದ್‌ಪುರದ ಹಾಜಿಗಂಜ್ ಉಪಜಿಲಾದಲ್ಲಿ ದುಷ್ಕರ್ಮಿಗಳ ಗುಂಪು ಮತ್ತು ಪೊಲೀಸರ ಮಧ್ಯೆ ಘರ್ಷಣೆ ನಡೆದು, ಕನಿಷ್ಠ ಮೂವರು ಸಾವನ್ನಪ್ಪಿ, ಅನೇಕರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಸ್ಥಳದಲ್ಲಿ ಪೊಲೀಸ್ ಹಾಗೂ ಅರೆಸೇನಾ ಪಡೆ ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.