ಒಸಾಕ(ಜಪಾನ್): ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ಜಪಾನ್ ತೆರಳಿರುವ ಪ್ರಧಾನಿ ಮೋದಿ ಇದೇ ವೇಳೆ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರನ್ನು ಭೇಟಿ ಮಾಡಲಿದ್ದಾರೆ.
ಭಾರತದ ಇತ್ತೀಚಿನ ಸುಂಕ ಹೇರಿಕೆ ಒಪ್ಪಲು ಸಾಧ್ಯವಿಲ್ಲ, ಈ ನಿರ್ಧಾರ ಹಿಂಪಡೆಯಬೇಕು ಎಂದು ಪ್ರಧಾನಿ ಮೋದಿ ಭೇಟಿಗೂ ಮುನ್ನ ಟ್ರಂಪ್ ತಮ್ಮಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಜಿ20 ಶೃಂಗಸಭೆಗೆ ಜಪಾನ್ ತಲುಪಿದ ಮೋದಿ... ಟ್ರಂಪ್ ಭೇಟಿ ಬಗ್ಗೆ ಹೆಚ್ಚಿದ ಕುತೂಹಲ
ಮೋದಿ ಜೊತೆಗಿನ ಮಾತುಕತೆ ಎದುರು ನೋಡುತ್ತಿದ್ದು, ಕಳೆದ ಕೆಲವು ವರ್ಷಗಳಿಂದ ಭಾರತವು ಅಮೆರಿಕದ ಸರಕುಗಳಿಗೆ ಹೆಚ್ಚಿನ ಸುಂಕ ವಸೂಲು ಮಾಡುತ್ತಿದೆ, ಇತ್ತೀಚೆಗೆ ಅದು ಮತ್ತಷ್ಟು ಹೆಚ್ಚಾಗಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ ಮತ್ತು ತಕ್ಷಣವೇ ಹಿಂಪಡೆಯಬೇಕು ಎಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.
ಜಪಾನಿನ ಒಸಾಕದಲ್ಲಿ ಜೂನ್ 28 ಹಾಗೂ 29ರಂದು ಜಿ-20 ಶೃಂಗಸಭೆ ನಡೆಯಲಿದ್ದು ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಟ್ರಂಪ್, ಪುಟಿನ್ ಸೇರಿದಂತೆ ಹಲವು ಜಾಗತಿಕ ನಾಯಕರ ಜೊತೆಗೆ ಮಾತುಕತೆ ನಡೆಸಲಿದ್ದಾರೆ.