ಕಾಬೂಲ್:ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಜೆ ಸಂಭವಿಸಿದ ಅವಳಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಈಗಾಗಲೇ ಉಗ್ರ ಸಂಘಟನೆ ಐಸಿಸ್-ಕೆ ಒಪ್ಪಿಕೊಂಡಿದೆ. ಈ ಕೃತ್ಯವನ್ನು ಭಾರತ ಖಂಡಿಸಿದ್ದು, ಭಯೋತ್ಪಾದನೆ ವಿರುದ್ಧ ಜಗತ್ತು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಕರೆ ನೀಡಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ ಟ್ವೀಟ್ ಮಾಡಿದ್ದು, 'ಈ ಭಯೋತ್ಪಾದಕ ದಾಳಿಗೆ ಬಲಿಯಾದವರ ಕುಟುಂಬಗಳಿಗೆ ನಮ್ಮ ಸಾಂತ್ವನವಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆ. ಭಯೋತ್ಪಾದನೆ ಮತ್ತು ಉಗ್ರ ಚಟುವಟಿಕೆಗಳಿಗೆ ಬೆಂಬಲ ನೀಡುವವರ ವಿರುದ್ಧ ಜಗತ್ತು ಒಟ್ಟಾಗಿ ನಿಲ್ಲಬೇಕು' ಎಂದು ಹೇಳಿದ್ದಾರೆ.