ಒಸಾಕಾ(ಜಪಾನ್):ಜಿ-20 ಶೃಂಗ ಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್ ತಲುಪಿರುವ ಪ್ರಧಾನಿ ನರೇಂದ್ರ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜಪಾನ್ ಪ್ರಧಾನಿ ಶಿಂಜೊ ಅಬೆ ಜತೆ ಮಹತ್ವದ ಮಾತುಕತೆ ನಡೆಸಿದರು.
ಮೂವರು ಮುಖಂಡರು ಸೇರಿ ತ್ರಿಪಕ್ಷೀಯ ಮಾತುಕತೆ ನಡೆಸಿದ್ದು, ಪ್ರಮುಖವಾಗಿ ಇರಾನ್, ದ್ವಿಪಕ್ಷೀಯ ಸಂಬಂಧ, ಇಂಧನ, ರಕ್ಷಣಾ ಕ್ಷೇತ್ರ ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಿದ್ದಾರೆ. ಇದಕ್ಕೂ ಮುಂಚೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಪ್ರಧಾನಿ ಮೋದಿಗೆ ಉಭಯ ದೇಶದ ನಾಯಕರು ಅಭಿನಂದನೆ ಸಲ್ಲಿಸಿದರು.