ಕಾಬೂಲ್:ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ಗುರುವಾರ ಸಂಭವಿಸಿದ ಅವಳಿ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭೀಕರ ದಾಳಿ ಮಾಡಿದ್ದು ತಾವೇ ಎಂದು ಉಗ್ರ ಸಂಘಟನೆ ಐಸಿಸ್-ಕೆ ಒಪ್ಪಿಕೊಂಡಿದೆ. ಉಗ್ರ ಸಂಘಟನೆಯ ಕೃತ್ಯವನ್ನು ಭಾರತ, ಬ್ರಿಟನ್ ಸೇರಿ ವಿಶ್ವದ ಹಲವು ರಾಷ್ಟ್ರಗಳು ಖಂಡಿಸಿವೆ.
ಕಾಬೂಲ್ ಆತ್ಮಾಹುತಿ ದಾಳಿಯನ್ನು ಅಮೆರಿಕ ಖಚಿತಪಡಿಸಿದೆ. ದಾಳಿಯಲ್ಲಿ ಯುಎಸ್ನ 13 ಸೇನಾ ಸಿಬ್ಬಂದಿ ಮೃತಪಟ್ಟಿದ್ದಾರೆ. ದಾಳಿಯ ಬಳಿಕವೂ ನಾವು ರಕ್ಷಣಾ ಕಾರ್ಯಾಚರಣೆ ಮುಂದುವರಿಸುತ್ತೇವೆ ಎಂದು ಅಮೆರಿಕಾದ ಕಮಾಂಡರ್ ಸ್ಪಷ್ಟಪಡಿಸಿದ್ದಾರೆ. ದಾಳಿಯಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ದಾಳಿಯ ಬಗ್ಗೆ ಹಲವು ದೇಶಗಳು ಎಚ್ಚರಿಕೆ ನೀಡಿದ ಬೆನ್ನಲ್ಲೇ ಸ್ಫೋಟ ಸಂಭವಿಸಿದೆ.