ಇಸ್ಲಾಮಾಬಾದ್ :ಪಾಕಿಸ್ತಾನದ ಶಿಕ್ಷಣ ಹೋರಾಟಗಾರ್ತಿ ಮತ್ತು ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್ ಝಾ, ಇತ್ತೀಚೆಗೆ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ತತ್ತ್ವಶಾಸ್ತ್ರ, ರಾಜಕೀಯ ಮತ್ತು ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.
ಸ್ವಾತ್ ಕಣಿವೆಯಲ್ಲಿ ಶಾಲೆಗೆ ಹೋಗಿದ್ದಕ್ಕಾಗಿ 2012ರಲ್ಲಿ ತಾಲಿಬಾನ್ ಉಗ್ರರು, ಮಲಾಲಾ ಮೇಲೆ ದೌರ್ಜನ್ಯ ನಡೆಸಿದ್ದರು. ಆದರೆ, ಆದೇ ಯುವತಿ ಇಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಲಾಲಾ, ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಪದವಿ ಪಡೆದ ವಿಷಯ ತಿಳಿಸಿದ್ದಾರೆ. ಕುಟುಂಬದೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.