ಅಫ್ಘಾನಿಸ್ತಾನ: ಅಫ್ಘಾನಿಸ್ತಾನವನ್ನು ತಾಲಿಬಾನ್ ಸಂಪೂರ್ಣವಾಗಿ ಹಿಡಿತಕ್ಕೆ ತೆಗೆದುಕೊಂಡಿರುವ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ಮತ್ತು ವಿಶ್ವದ ಕಿರಿಯ ನೊಬೆಲ್ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸಫ್‌ಜೈ ಆತಂಕ ವ್ಯಕ್ತಪಡಿಸಿದ್ದಾರೆ.
"ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಹಿಡಿತ ಸಾಧಿಸುವುದು ಆಘಾತಕಾರಿ ಸಂಗತಿ. ಅಲ್ಲಿನ ಜನರು ಮುಖ್ಯವಾಗಿ ಮಹಿಳೆಯರು, ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಪರ ಹೋರಾಡುವವರ ಸ್ಥಿತಿ ಬಗ್ಗೆ ನಾನು ಚಿಂತಿಸುತ್ತಿದ್ದೇನೆ" ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.