ಇಸ್ಲಾಮಾಬಾದ್:ದುಷ್ಕರ್ಮಿಯೊಬ್ಬ18 ವರ್ಷದ ಹಿಂದೂ ಯುವತಿಗೆ ನಡುರಸ್ತೆಯಲ್ಲೇ ಮನಬಂದಂತೆ ಗುಂಡು ಹಾರಿಸಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ. ಯುವತಿಯನ್ನು ಮದುವೆಯಾಗಲು ನಿರ್ಧರಿಸಿದ್ದ ವ್ಯಕ್ತಿ ಆಕೆಯನ್ನು ಇಸ್ಲಾಂಗೆ ಮತಾಂತರ ಮಾಡಲು ಮುಂದಾಗಿದ್ದ ಎಂದು ತಿಳಿದು ಬಂದಿದೆ.
ಮತಾಂತರಗೊಳ್ಳಲು ವಿರೋಧಿಸಿದ ಯುವತಿಯ ಮೇಲೆ ಗುಂಡಿನ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪಾಕಿಸ್ತಾನದ ಸುದ್ದಿಸಂಸ್ಥೆಯೊಂದು ವರದಿ ಮಾಡಿರುವ ಪ್ರಕಾರ, ಆರೋಪಿಯನ್ನು ವಾಹೀದ್ ಎಂದು ಗುರುತಿಸಲಾಗಿದೆ. ಈತ ಹಿಂದೂ ಯುವತಿ ಪೂಜಾ ಕುಮಾರಿ ಜೊತೆ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದ. ಇದೇ ಕಾರಣಕ್ಕಾಗಿ ಆಕೆಯನ್ನು ಇಸ್ಲಾಂಗೆ ಮತಾಂತರ ಮಾಡಲು ಮುಂದಾಗಿದ್ದ ಎಂದು ತಿಳಿದು ಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.