ಇಸ್ಲಾಮಾಬಾದ್(ಪಾಕಿಸ್ತಾನ): ಕೊರೊನಾ ವೈರಸ್ ಭೀತಿ ನಡುವೆಯೂ ಪವಿತ್ರ ರಂಝಾನ್ ತಿಂಗಳಲ್ಲಿ ಮಸೀದಿಗಳನ್ನು ತೆರೆಯಲು ಪಾಕಿಸ್ತಾನ ಸರ್ಕಾರ ತೀರ್ಮಾನಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಆರೀಫ್ ಅಲ್ವಿ, ರಂಝಾನ್ ತಿಂಗಳಲ್ಲಿ ದೇಶದಲ್ಲಿ ಮಸೀದಿಗಳು ತೆರೆದಿರುತ್ತವೆ. ಆದರೆ, ಜನರು ಕೊರೊನಾ ನಿಯಂತ್ರಿಸಲು ವಿಧಿಸಲಾಗಿರುವ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಸೀದಿಗಳಲ್ಲಿ ಪ್ರಾರ್ಥನೆಗೆ ಸಂಬಂಧಿಸಿದಂತೆ ಸರ್ಕಾರ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಲಿದೆ ಎಂದಿದ್ದಾರೆ.