ಇಸ್ಲಾಮಾಬಾದ್:ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು, ನಿತ್ಯ ಲಕ್ಷಾಂತರ ಸೋಂಕಿತ ಪ್ರಕರಣ ದಾಖಲಾಗುತ್ತಿವೆ. ಇದರ ಮಧ್ಯೆ ಸಾವಿರಾರು ಜನರು ಡೆಡ್ಲಿ ವೈರಸ್ಗೆ ಬಲಿಯಾಗುತ್ತಿದ್ದಾರೆ. ಎರಡನೇ ಅಲೆ ಜೋರಾಗಿ ಬೀಸಲು ಶುರು ಮಾಡಿರುವ ಕಾರಣ ದೇಶದ ಬಹುತೇಕ ರಾಜ್ಯಗಳಲ್ಲಿ ಆಕ್ಸಿಜನ್, ಬೆಡ್ ಹಾಗೂ ಔಷಧ ಕೊರತೆ ಉಂಟಾಗಿದೆ.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಕೋವಿಡ್ ವಿರುದ್ಧ ಒಟ್ಟಾಗಿ ಹೋರಾಡಬೇಕು ಎಂದಿದ್ದಾರೆ.
ಇಮ್ರಾನ್ ಖಾನ್ ಟ್ವೀಟ್ ಇಂತಿದೆ
ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿರುವ ಭಾರತದೊಂದಿಗೆ ನಮ್ಮ ಒಗ್ಗಟ್ಟು ವ್ಯಕ್ತಪಡಿಸಲು ನಾನು ಭಯಸುತ್ತೇನೆ. ನಮ್ಮ ನೆರೆಯ ದೇಶ ಮತ್ತು ಇಡೀ ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಬಳಲುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮಾನವೀಯತೆಯು ಎದುರಿಸುತ್ತಿರುವ ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಂದಾಗಿ ಹೋರಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.