ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಭಾರತದಿಂದ ನ್ಯೂಜಿಲೆಂಡ್ಗೆ ಪ್ರಯಾಣಿಸುವ ನಾಗರಿಕರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ.
ಕೊರೊನಾ ಉಲ್ಬಣ: ಭಾರತೀಯರಿಗೆ ನ್ಯೂಜಿಲೆಂಡ್ ಪ್ರವೇಶ ತಾತ್ಕಾಲಿಕ ಸ್ಥಗಿತ
ಭಾರತದಿಂದ ನ್ಯೂಜಿಲೆಂಡ್ಗೆ ಪ್ರಯಾಣಿಸುವ ನಾಗರಿಕರಿಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಆದೇಶ ಹೊರಡಿಸಿದ್ದಾರೆ.
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್
ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ಆದೇಶ ಹೊರಡಿಸಿದ್ದು, ಇದು ಏಪ್ರಿಲ್ 11 ರಿಂದ ಪ್ರಾರಂಭವಾಗಿ 28ರವರೆಗೆ ಜಾರಿಯಲ್ಲಿರಲಿದೆ.
ದೇಶದಲ್ಲಿ ದಿನೇ ದಿನೆ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿವೆ. ಈಗಾಗಲೇ 25,26,77,379 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಏ.7ರಂದು 12,37,781 ಮಾದರಿಗಳನ್ನು ಪರೀಕ್ಷಿಸಲಾಗಿದೆ.