ಅಬುದಾಬಿ:ಬಿಎಲ್‌ಎಸ್ ಅಂತಾರಾಷ್ಟ್ರೀಯ ಕೇಂದ್ರಗಳಲ್ಲಿ ಸಲ್ಲಿಸಬೇಕಾದ ಪಾಸ್‌ಪೋರ್ಟ್ ನವೀಕರಣ ಅರ್ಜಿಗಳ ಮೇಲಿನ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲು ಯುಎಇ ಸರ್ಕಾರ ನಿರ್ಧರಿಸಿದೆ ಎಂದು ಅಬುದಾಬಿಯ ಭಾರತೀಯ ರಾಯಭಾರ ಕಚೇರಿ ಬುಧವಾರ ತಿಳಿಸಿದೆ.
ಪಾಸ್‌ಪೋರ್ಟ್ ನವೀಕರಣ ಕಾರ್ಯವನ್ನು ಕೋವಿಡ್-19 ಸಾಂಕ್ರಾಮಿಕ ಮತ್ತು ಭಾರತಕ್ಕೆ ಅಂತಾರಾಷ್ಟ್ರೀಯ ವಿಮಾನ ಹಾರಾಟದ ತಾತ್ಕಾಲಿಕ ನಿಷೇಧದ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈ ಹಿಂದೆ ಅಬುದಾಬಿ ಸರ್ಕಾರವು ನಿರ್ಬಂಧಗಳನ್ನು ಜಾರಿಗೆ ತಂದಿತ್ತು. ಆ ಬಳಿಕ ಜೂನ್ 21ರಂದು ಭಾರತೀಯ ರಾಯಭಾರ ಕಛೇರಿಯು ಪಾಸ್‌ಪೋರ್ಟ್ ನವೀಕರಣ ಅರ್ಜಿಗಳ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕಲು ಮನವಿ ಸಲ್ಲಿಸಿದ್ದು, ಜುಲೈ 15ರಂದು ಈಗ ಯುಎಇ ಅಧಿಕಾರಿಗಳು ಅದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಸಂಬಂಧಪಟ್ಟ ಅರ್ಜಿದಾರರಿಗೆ ನವೀಕರಣ ಮಾಡಿಸಿಕೊಳ್ಳಲು ಸಾಧ್ಯವಾಗುತ್ತದೆ.