ಕರ್ನಾಟಕ

karnataka

ETV Bharat / international

ಕೋವಿಡ್​​ನಿಂದ ಟ್ರಂಪ್ ದಂಪತಿ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ ಕಿಮ್ - ಟ್ರಂಪ್​ಗೆ ಕೋವಿಡ್-19

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಕಿಮ್ ಜೊಂಗ್ ಉನ್ ಸಂದೇಶ ಕಳುಹಿಸಿದ್ದಾರೆ ಎಂದು ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆ ವರದಿ ಮಾಡಿದೆ.

trump  kim
trump kim

By

Published : Oct 3, 2020, 11:35 AM IST

ಸಿಯೋಲ್ (ದಕ್ಷಿಣ ಕೊರಿಯಾ): ಕೋವಿಡ್-19 ಸೋಂಕಿಗೆ ಒಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪತ್ನಿ ಮೆಲಾನಿಯಾ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಉತ್ತರ ಕೊರಿಯಾದ ನಾಯಕ ಕಿಮ್ ಜೊಂಗ್ ಉನ್ ಸಹಾನುಭೂತಿಯ ಸಂದೇಶ ಕಳುಹಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

"ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಕಿಮ್ ಪ್ರಾಮಾಣಿಕವಾಗಿ ಆಶಿಸಿದ್ದಾರೆ" ಎಂದು ಕೊರಿಯಾದ ಕೇಂದ್ರ ಸುದ್ದಿ ಸಂಸ್ಥೆ ವರದಿ ಮಾಡಿದೆ.

ನಾನು ಮತ್ತು ಪತ್ನಿ ಕೊರೊನಾ ವೈರಸ್​ಗೆ ತುತ್ತಾಗಿದ್ದೇವೆ ಎಂದು ಟ್ರಂಪ್ ಶುಕ್ರವಾರ ಹೇಳಿದ್ದು, ವಿಶ್ವದಾದ್ಯಂತದ ನಾಯಕರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ABOUT THE AUTHOR

...view details