ಇಸ್ಲಾಮಾಬಾದ್:ಕಾಶ್ಮೀರದ ವಿಚಾರದಲ್ಲಿ ಎರಡನೇ ಅವಧಿಯ ಮೋದಿ ಸರ್ಕಾರ ಕಠಿಣ ನಿರ್ಧಾರ ತಳೆದಿದ್ದು, ಇದು ಪಾಕಿಸ್ತಾನದ ರಾಜಕೀಯ ನಾಯಕರಿಗೆ ಬಿಸಿತುಪ್ಪವಾಗಿ ಪರಿಣಮಿಸಿದೆ.
ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಪಾಕಿಸ್ತಾನ ಪ್ರತಿಪಕ್ಷ ನಾಯಕ ಬಿಲಾವಲ್ ಭುಟ್ಟೋ, ಮೋದಿ ಸರ್ಕಾರದ ದಿಟ್ಟ ಹೆಜ್ಜೆಯಿಂದ ಪಾಕಿಸ್ತಾನ ಭಯಗೊಂಡಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ.
ಕಾಶ್ಮೀರ ಹಿಂಸಾಚಾರ ಪಾಕ್ ಪ್ರಚೋದಿತ: ರಾಗಾ ಹೊಸ ರಾಗ..!
ಕೆಲ ವರ್ಷಗಳ ಹಿಂದೆ ಶ್ರೀನಗರವನ್ನು ವಶಪಡಿಸಿಕೊಳ್ಳಲು ಪಾಕಿಸ್ತಾನ ಹವಣಿಸುತ್ತಿತ್ತು. ಆದರೆ, ಸದ್ಯ ಕಾಲ ಬದಲಾಗಿದ್ದು, ನಾವು ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ಪ್ರದೇಶವನ್ನು ಉಳಿಸಿಕೊಳ್ಳುವ ಸವಾಲು ಎದುರಾಗಿದೆ ಎಂದು ಪಾಕಿಸ್ತಾನ ಪೀಪಲ್ಸ್ ಪಾರ್ಟಿ(ಪಿಪಿಪಿ) ಮುಖ್ಯಸ್ಥ ಬಿಲಾವಲ್ ಭುಟ್ಟೋ ಆತಂಕದಿಂದ ನುಡಿದಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರವನ್ನು ಮುನ್ನಡೆಸುವಲ್ಲಿ ಸಂಪೂರ್ಣ ಸೋತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಬಿಲಾವಲ್ ಭುಟ್ಟೋ ಕೇಂದ್ರದ ಮೇಲೆ ಕಿಡಿಕಾರಿದ್ದಾರೆ.