ಕರ್ನಾಟಕ

karnataka

ETV Bharat / international

ಆಡಳಿತ ಪಕ್ಷ ದೇಶವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ : ಇಮ್ರಾನ್ ಖಾನ್ ವಿರುದ್ಧ ಶೆಹ್ಬಾಜ್ ಷರೀಫ್ ಆಕ್ರೋಶ - Opposition slams Imran Khan govt

ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ ಬಿಡುಗಡೆ ಮಾಡಿದ ವಾರ್ಷಿಕ ವರದಿಯ ಪ್ರಕಾರ, ಇಮ್ರಾನ್ ಖಾನ್ ನೇತೃತ್ವದ-ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರದ ಅಡಿಯಲ್ಲಿ ದೇಶದ ಒಟ್ಟು ಸಾಲವು ಮೂರು ವರ್ಷಗಳಲ್ಲಿ 149 ಲಕ್ಷ ಕೋಟಿ ರೂ.ಗಳಿಗೆ ಏರಿದೆ ಎಂದು ದೇಶದ ಸ್ಥಳೀಯ ಮಾಧ್ಯಮ ವರದಿ ಮಾಡಿದೆ..

imran-khan
ಇಮ್ರಾನ್ ಖಾನ್

By

Published : Sep 22, 2021, 5:22 PM IST

Updated : Sep 22, 2021, 5:28 PM IST

ಇಸ್ಲಾಮಾಬಾದ್​ :ಆಡಳಿತ ಪಕ್ಷ ದೇಶವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ ಎಂದು ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ಹ್​​ (ಪಿಎಂಎಲ್-ಎನ್) ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಶೆಹ್ಬಾಜ್ ಷರೀಫ್ ಆರೋಪಿಸಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ನಡೆದ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನದಲ್ಲಿ ಮಾತನಾಡಿದ ಅವರು, "ಪ್ರಸ್ತುತ ಸರ್ಕಾರದಿಂದ ಐದು ಮಿಲಿಯನ್ ಜನರು ನಿರುದ್ಯೋಗಿಗಳಾಗಿದ್ದಾರೆ. ಬಡವರಿಗೆ ದಿನಕ್ಕೆ ಎರಡು ಹೊತ್ತು ಊಟ ನೀಡುವುದು ಅಸಾಧ್ಯವಾಗಿದೆ" ಎಂದರು.

ದೇಶದ "ಅಭೂತಪೂರ್ವ ಹಣದುಬ್ಬರದ" ಬಗ್ಗೆ ಮಾತನಾಡಿದ ಅವರು, ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಸರ್ಕಾರ ತನ್ನ ಮೂರು ವರ್ಷಗಳ ಅವಧಿಯಲ್ಲಿ "ಒಂದೇ ಒಂದು ಪೈಸೆ" ಯೋಜನೆಯನ್ನು ನಿರ್ಮಿಸಿಲ್ಲ ಎಂದು ಹೇಳಿರುವುದಾಗಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಮಾಡಿದೆ.

ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನ ಬಿಡುಗಡೆ ಮಾಡಿದ ವಾರ್ಷಿಕ ವರದಿಯ ಪ್ರಕಾರ, ಇಮ್ರಾನ್ ಖಾನ್ ನೇತೃತ್ವದ-ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರದ ಅಡಿಯಲ್ಲಿ ದೇಶದ ಒಟ್ಟು ಸಾಲವು ಮೂರು ವರ್ಷಗಳಲ್ಲಿ 149 ಲಕ್ಷ ಕೋಟಿ ರೂ.ಗಳಿಗೆ ಏರಿದೆ ಎಂದು ದೇಶದ ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಪಾಕಿಸ್ತಾನದಲ್ಲಿ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವನ್ನು ರಚಿಸಿ ಮೂರು ವರ್ಷ ಕಳೆದಿದೆ. ಆದರೆ, ಪ್ರಧಾನಿ ಇಮ್ರಾನ್ ಖಾನ್ ಪಕ್ಷವು ತನ್ನ 2018ರ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಭರವಸೆ ಸಾಧಿಸುವಲ್ಲಿ ವಿಫಲವಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಓದಿ:ಭಾರತದ ಎಚ್ಚರಿಕೆಗೆ ಮಣಿದ ಬ್ರಿಟನ್‌: ಕೋವಿಶೀಲ್ಡ್‌ ಲಸಿಕೆ ಪಡೆದ ಭಾರತೀಯರಿಗಿಲ್ಲ ಕ್ವಾರಂಟೈನ್‌

Last Updated : Sep 22, 2021, 5:28 PM IST

ABOUT THE AUTHOR

...view details