ಇಸ್ಲಾಮಾಬಾದ್: ಪ್ರಸ್ತುತ ಕೋವಿಡ್ ಬಿಕ್ಕಟ್ಟು ಎದುರಿಸುತ್ತಿರುವ ಭಾರತಕ್ಕೆ ಪಾಕಿಸ್ತಾನ ಪರಿಹಾರ ಮತ್ತು ಬೆಂಬಲ ನೀಡುವುದಾಗಿ ಹೇಳಿದೆ.
"ತೀವ್ರವಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ಎರಡನೇ ಅಲೆಯ ಹಿನ್ನೆಲೆಯಲ್ಲಿ ನಾವು ಭಾರತಕ್ಕೆ ಬೆಂಬಲವನ್ನು ವ್ಯಕ್ತಪಡಿಸುತ್ತೇವೆ. ನಾವು ಮೊದಲು ಮಾನವೀಯತೆ ಎಂಬ ನೀತಿಯನ್ನು ನಂಬುತ್ತೇವೆ" ಪಾಕ್ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಟ್ವೀಟ್ ಮಾಡಿದ್ದಾರೆ.
"ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾರತೀಯರೊಂದಿಗೆ ನಾವಿದ್ದೇವೆ. ಅಪಾಯಕಾರಿ ಕೊರೊನಾ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತದ ಜನರೊಂದಿಗೆ ನಮ್ಮ ಒಗ್ಗಟ್ಟನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. ನಮ್ಮ ನೆರೆಯ ದೇಶ ಮತ್ತು ಇಡೀ ಜಗತ್ತಿನಲ್ಲಿ ಕೋವಿಡ್ ಸಾಂಕ್ರಾಮಿಕದಿಂದ ಬಳಲುತ್ತಿರುವವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಈ ಜಾಗತಿಕ ಸವಾಲಿನ ವಿರುದ್ಧ ನಾವು ಒಗ್ಗೂಡಿ ಹೋರಾಡಬೇಕು" ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ನಮ್ಮ ಸ್ನೇಹಿತರೊಂದಿಗೆ ನಾವಿದ್ದೇವೆ: ಭಾರತದ ಕೋವಿಡ್ ಹೋರಾಟಕ್ಕೆ ಕೈ ಜೋಡಿಸಿದ ಆಸ್ಟ್ರೇಲಿಯಾ!
ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಜಾಹಿದ್ ಹಫೀಜ್ ಚೌಧರಿ, "ಇಂಥ ಕಷ್ಟದ ಸಮಯದಲ್ಲಿ ಭಾರತದ ಜನರೊಂದಿಗೆ ನಾವು ಇರುತ್ತೇವೆ. ದೇವರು ದಯೆ ತೋರಲಿ, ಈ ಕಷ್ಟದ ಸಮಯ ಶೀಘ್ರವೇ ಮುಗಿಯಲಿ" ಎಂದು ಟ್ವೀಟ್ ಮಾಡಿದ್ದಾರೆ.