ಇಸ್ಲಾಮಾಬಾದ್ (ಪಾಕಿಸ್ತಾನ): ಪಾಕಿಸ್ತಾನ ಕೊರೊನಾ ಅಟ್ಟಹಾಸಕ್ಕೆ ಅಕ್ಷರಶಃ ನಲುಗಿ ಹೋಗಿದೆ. ಕೋವಿಡ್ ಮಹಾಮಾರಿಗೆ ಒಂದೇ ದಿನ 100 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಪಾಕ್ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 2,172 ತಲುಪಿದೆ. ಸೋಮವಾರ ಒಂದೇ ದಿನ 105 ಸಾವುಗಳು ವರದಿಯಾಗಿವೆ. ಸುಮಾರು 35,018 ರೋಗಿಗಳು ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.