ಇಸ್ಲಾಮಾಬಾದ್(ಪಾಕಿಸ್ತಾನ):ಅಫ್ಘಾನಿಸ್ತಾನದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚೆ ನಡೆಸುವ ಸಲುವಾಗಿ ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿ ಸಭೆಯೊಂದನ್ನು ಆಯೋಜಿಸಲಾಗಿದ್ದು, ಗುರುವಾರ ನಡೆಯಲಿರುವ ಈ ಸಭೆಯಲ್ಲಿ ಅಮೆರಿಕ, ಚೀನಾ ಮತ್ತು ರಷ್ಯಾದ ಹಿರಿಯ ರಾಜತಾಂತ್ರಿಕ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮಹಮೂದ್ ಖುರೇಷಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅಫ್ಘಾನಿಸ್ತಾನದ ಹಂಗಾಮಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರನ್ನು ಈ ರಾಜತಾಂತ್ರಿಕ ನಾಯಕರು ಭೇಟಿಯಾಗಲಿದ್ದಾರೆ ಎಂದು ಪಾಕ್ ಪತ್ರಿಕೆ ಡಾನ್ ವರದಿ ಮಾಡಿದೆ.
ಮುತ್ತಕಿ ಇಂದು ಇಸ್ಲಾಮಾಬಾದ್‌ಗೆ ಆಗಮಿಸಲಿದ್ದಾರೆ. ಆಗಸ್ಟ್‌ನಲ್ಲಿ ತಾಲಿಬಾನ್ ಕಾಬೂಲ್ ಅನ್ನು ನಿಯಂತ್ರಣಕ್ಕೆ ತೆಗೆದುಕೊಂಡ ನಂತರ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನದ ಸಚಿವರೊಬ್ಬರು ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿದ್ದಾರೆ.