ಇಸ್ಲಾಮಾಬಾದ್:ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಉನ್ನತ ಸಹಾಯಕ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅಸಿಮ್ ಸಲೀಮ್ ಬಾಜ್ವಾ ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಕಾರಣ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಇಮ್ರಾನ್ ಖಾನ್ ಅವರ ಪ್ರಧಾನ ಸಹಾಯಕರ (ಎಸ್‌ಎಪಿಎಂ) ಸ್ಥಾನದಿಂದ ಕೆಳಗಿಳಿಯುವುದಾಗಿ ಬಜ್ವಾ ಹೇಳಿದ್ದಾರೆಂದು ಜಿಯೋ ನ್ಯೂಸ್ ವರದಿ ಮಾಡಿದೆ. ಚೀನಾ-ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಪ್ರಾಧಿಕಾರದ ಅಧ್ಯಕ್ಷರಾಗಿ ತಮ್ಮ ಕೆಲಸವನ್ನು ಮುಂದುವರೆಸುವುದಾಗಿ ಬಾಜ್ವಾ ತಿಳಿಸಿದ್ದಾರೆ. ಸಿಪಿಇಸಿ ಯೋಜನೆಯು ದೇಶದ ಭವಿಷ್ಯ, ಇದರ ಬಗ್ಗೆ ಗಮನ ಹರಿಸಲು ಪ್ರಧಾನಿ ನನಗೆ ಅವಕಾಶ ನೀಡುತ್ತಾರೆ ಎಂಬ ಭರವಸೆ ಹೊಂದಿದ್ದೇನೆ ಎಂದಿದ್ದಾರೆ.