ಕರ್ನಾಟಕ

karnataka

ETV Bharat / international

ಶುಲ್ಕ ಹೆಚ್ಚಳ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಅಶ್ರುವಾಯು, ಲಾಠಿ ಚಾರ್ಜ್ - ವಿದ್ಯಾರ್ಥಿಗಳು ಶುಲ್ಕ ಹೆಚ್ಚಳ

ವಿದ್ಯಾರ್ಥಿಗಳು ಶುಲ್ಕ ಹೆಚ್ಚಳ ವಿರುದ್ಧ ನಗರದ ಯೂನಿವರ್ಸಿಟಿ ರಸ್ತೆಯನ್ನು ನಿರ್ಬಂಧಿಸಿದ್ದರು. ಅಲ್ಲಿಗೆ ಬಂದ ಪೊಲೀಸರು ಏಕಾಏಕಿ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ.

ಶುಲ್ಕ ಹೆಚ್ಚಳವನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಅಶ್ರುವಾಯು, ಲಾಠಿ ಚಾರ್ಜ್
ಶುಲ್ಕ ಹೆಚ್ಚಳವನ್ನು ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ: ಪೊಲೀಸರಿಂದ ಅಶ್ರುವಾಯು, ಲಾಠಿ ಚಾರ್ಜ್

By

Published : Jul 8, 2021, 4:55 AM IST

ಪೇಶಾವರ್ , ಪಾಕಿಸ್ತಾನ: ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸುತ್ತಿದ್ದ ಇಸ್ಲಾಮಿಯಾ ಕಾಲೇಜು ವಿದ್ಯಾರ್ಥಿಗಳ ಮೇಲೆ ಪೇಶಾವರ ಪೊಲೀಸರು ಲಾಠಿ ಪ್ರಹಾರ ಹಾಗೂ ಅಶ್ರುವಾಯು ನಡೆಸಿದ್ದಾರೆ.

ವಿದ್ಯಾರ್ಥಿಗಳು ಶುಲ್ಕ ಹೆಚ್ಚಳ ವಿರುದ್ಧ ನಗರದ ಯೂನಿವರ್ಸಿಟಿ ರಸ್ತೆಯನ್ನು ನಿರ್ಬಂಧಿಸಿದ್ದರು. ಈ ಹಿನ್ನೆಲೆ ಸಂಚಾರಕ್ಕಾಗಿ ರಸ್ತೆಯನ್ನು ತೆರವುಗೊಳಿಸಲು, ವಿದ್ಯಾರ್ಥಿಗಳ ಮೇಲೆ ಲಾಠಿ ಮತ್ತು ಅಶ್ರುವಾಯು ಬಳಸಿದ್ದರಿಂದ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಶಾಂತಿಯುತ ಪ್ರತಿಭಟನೆ ನಡೆಸಲಾಗುತ್ತಿತ್ತು.ಆದರೆ, ಪೊಲೀಸರು ಬಂದು ಈ ರೀತಿ ಮಾಡಿದ್ದರಿಂದ 12 ವಿದ್ಯಾರ್ಥಿಗಳಿಗೆ ಗಾಯವಾಗಿದೆ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹೇಳಿದ್ದಾರೆ.

ABOUT THE AUTHOR

...view details