ಇಸ್ಲಾಮಾಬಾದ್, ಪಾಕಿಸ್ತಾನ:ಕೋವಿಡ್ ಸೋಂಕು ತಡೆಯುವ ಸಲುವಾಗಿ ಪಾಕಿಸ್ತಾನದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ತೀವ್ರಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆಯುವಂತೆ ಮಾಡಲು ವಿಭಿನ್ನ ಕ್ರಮವೊಂದನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ.
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಸರ್ಕಾರ ವಿಭಿನ್ನ ಕ್ರಮವೊಂದನ್ನು ಜಾರಿಗೊಳಿಸಲು ನಿರ್ಧರಿಸಿದ್ದು, ಕೋವಿಡ್ ವ್ಯಾಕ್ಸಿನ್ ಪಡೆಯದವರ ಮೊಬೈಲ್ ಸಿಮ್ ಕಾರ್ಡ್ಗಳನ್ನು ಬ್ಲಾಕ್ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಪೇಷಾವರ ವಿಭಾಗದ ಐದು ಜಿಲ್ಲೆಗಳಾದ ಪೇಷಾವರ, ಮೊಹ್ಮದ್, ಖೈಬರ್, ಚರ್ಸಡ್ಡ, ನೌಷೇರಾಗಳಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದ್ದು, ಆಗಸ್ಟ್ 31ರೊಳಗೆ ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಅಂತಹ ವ್ಯಕ್ತಿಗಳ ಸಿಮ್ ಕಾರ್ಡ್ ಬ್ಲಾಕ್ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಡಾನ್ ವರದಿ ಮಾಡಿದೆ.