ಮೆಡನ್(ಇಂಡೋನೇಷ್ಯಾ):ನಗರದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಉಂಟಾಗಿದೆ. ಸುಮಾರು 2,700ಕ್ಕೂ ಅಧಿಕ ಮನೆಗಳು ನೆರೆಗೆ ಸಿಲುಕಿದ್ದು, ಕನಿಷ್ಠ ಇಬ್ಬರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಪ್ರವಾಹಕ್ಕೆ ತತ್ತರಿಸಿದ ಇಂಡೋನೇಷ್ಯಾ.. ಇಬ್ಬರ ಸಾವು, ಹಲವರು ನಾಪತ್ತೆ - ಭಾರಿ ಪ್ರವಾಹಕ್ಕೆ ತತ್ತರಿಸಿದ ಇಂಡೋನೇಷ್ಯಾ
ಇಂಡೋನೇಷ್ಯಾದ ಮೆಡನ್ನಲ್ಲಿ ಭಾರಿ ಮಳೆಯಾಗುತ್ತಿದ್ದು, ಲಕ್ಷಾಂತರ ಜನರ ಬದುಕು ಬೀದಿಗೆ ಬಿದ್ದಿದೆ. ಸುಮಾರು 2,700 ಮನೆಗಳು ಪ್ರವಾಹಕ್ಕೆ ಸಿಲುಕಿದ್ದು, 29 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಉತ್ತರ ಸುಮಾತ್ರಾದಲ್ಲಿ ಆರು ಮಂದಿ ಕಾಣೆಯಾಗಿದ್ದು, ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲವಾರು ಪ್ರದೇಶಗಳಲ್ಲಿ ನೀರಿನ ಮಟ್ಟ 5 ಮೀಟರ್ಗಿಂತಲೂ ಹೆಚ್ಚಿದ್ದು, ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕೆಲಸ ನಡೆಯುತ್ತಿದೆ. ಹಲವೆಡೆ ಭೂ ಕುಸಿತ ಉಂಟಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ.
ಈ ಮಧ್ಯೆ ನಿರಾಶ್ರಿತರ ಕೇಂದ್ರದಲ್ಲಿರುವ ಜನರು, ಟಿವಿ, ಉತ್ತಮ ಆಹಾರ, ಹೊಸ ಬಟ್ಟೆ ಬೇಕು ಎಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಈ ವರ್ಷದ ಆರಂಭದಲ್ಲಿ ಜಕಾರ್ತಾದಲ್ಲಿ ಸಂಭವಿಸಿದ ಪ್ರವಾಹ ಹಾಗೂ ಭೂ ಕುಸಿತ 60 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು. ಆ ಘಟನೆ ಮರುಕಳಿಸುತ್ತಾ ಅನ್ನೋ ಆತಂಕ ಸಾರ್ವಜನಿಕರದ್ದಾಗಿದೆ.