ನವದೆಹಲಿ:ಸದಸ್ಯ ರಾಷ್ಟ್ರಗಳ ಸಹಮತದ ಕೊರತೆಯಿಂದಾಗಿ ಸಾರ್ಕ್ (SAARC-South Asian Association for Regional Cooperation) ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯನ್ನು ರದ್ದು ಮಾಡಲಾಗಿದೆ.
ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್, ಭಾರತ, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾ ಈ ಸಾರ್ಕ್ನ ಸಂಘಟನೆಯ ಸದಸ್ಯ ರಾಷ್ಟ್ರಗಳಾಗಿದ್ದು, ಎಲ್ಲ ರಾಷ್ಟ್ರಗಳ ಒಪ್ಪಿಗೆಯ ಕೊರತೆಯಿಂದಾಗಿ ಸಭೆಯನ್ನು ರದ್ದು ಮಾಡಲಾಗಿದೆ ಎಂದು ಸಾರ್ಕ್ನ ಅಧಿಕಾರಿಯೊಬ್ಬರು ಎಎನ್ಐಗೆ ಮಾಹಿತಿ ನೀಡಿದ್ದಾರೆ.
ಇದಕ್ಕೂ ಮೊದಲು ನೇಪಾಳದಲ್ಲಿ ಸಾರ್ಕ್ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆ ನಡೆಸಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದರೆ, ಈ ಬಗ್ಗೆ ನಿಖರವಾದ ಮಾಹಿತಿ ಇರಲಿಲ್ಲ. ಈಗ ಬೇರೆಯದೇ ಬೆಳವಣಿಗೆಯಲ್ಲಿ ಸಾರ್ಕ್ನ ಈ ಸಭೆ ರದ್ದಾಗಿದೆ.