ದಕ್ಷಿಣ ವಜೀರಿಸ್ತಾನ್(ಪಾಕಿಸ್ತಾನ):ತೆಹ್ರೀಕ್-ಇ-ತಾಲಿಬಾನ್ ಪಾಕಿಸ್ತಾನ ಉಗ್ರ ಸಂಘಟನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನದ ಏಳು ಯೋಧರು ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ದಕ್ಷಿಣ ವಜೀರಿಸ್ತಾನದಲ್ಲಿ ನಡೆದ ಗುಂಡಿನ ಕಾಳಗದ ವೇಳೆ ಈ ಘಟನೆ ಸಂಭವಿಸಿದೆ.
ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಪ್ರತಿದಾಳಿ ನಡೆಸಿರುವ ಯೋಧರು ಐವರು ಉಗ್ರರನ್ನು ಹತ್ಯೆಗೈದಿದ್ದಾರೆ. ಸ್ಥಳದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.