ವಾಷಿಂಗ್ಟನ್: ಅಫ್ಘಾನಿಸ್ತಾನದಲ್ಲಿನ ಹಿಂಸಾಚಾರಕ್ಕೆ ಪಾಕ್ ಪರೋಕ್ಷವಾಗಿ ಬೆಂಬಲಿಸುತ್ತಿದೆ ಎಂಬ ಆರೋಪಕ್ಕೆ ಪ್ರಧಾನಿ ಇಮ್ರಾನ್ಖಾನ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಾಲಿಬಾನ್ ಎಂದು ಗುರುತಿಸಲಾಗಿರುವವರಲ್ಲಿ ಹೆಚ್ಚಿನವರು ಜನಸಾಮಾನ್ಯರು. ಗಡಿಯಲ್ಲಿ ಮೂರು ಮಿಲಿಯನ್ ಆಫ್ಘನ್ ನಿರಾಶ್ರಿತರಿದ್ದಾರೆ ಅವರನ್ನು ಹೇಗೆ ಕೊಲ್ಲೋಕೆ ಸಾಧ್ಯ ಎಂದು ಪ್ರಧಾನಿ ಇಮ್ರಾನ್ಖಾನ್ ಪ್ರಶ್ನಿಸಿದ್ದಾರೆ.
ಖಾಸಗಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಖಾನ್, ಪಾಕಿಸ್ತಾನವು 30 ಲಕ್ಷ ಆಫ್ಘನ್ ನಿರಾಶ್ರಿತರಿಗೆ ಆಶ್ರಯ ನೀಡುತ್ತಿದೆ. ಅದರಲ್ಲಿ ಹೆಚ್ಚಿನವರು ಪಶ್ತೂನ್ ಹಾಗೂ ತಾಲಿಬಾನ್ ಹೋರಾಟಗಾರರ ಜನಾಂಗದವರೇ ಆಗಿದ್ದಾರೆ. ಸದ್ಯ 5 ಲಕ್ಷ ಶಿಬಿರಗಳಿದ್ದು, ಅವುಗಳಲ್ಲಿ ಕೆಲವು ಉಗ್ರ ಸಂಘಟನೆಗೆ ಸೇರಿದವರಾಗಿಲ್ಲ. ಜನಸಾಮಾನ್ಯರೂ ಇದ್ದಾರೆ. ಅವರನ್ನು ನಾವು ಹೇಗೆ ಹತ್ಯೆಗೈಯ್ಯುವುದಕ್ಕೆ ಸಾಧ್ಯ ಎಂದು ಕಿಡಿಕಾರಿದ್ದಾರೆ.
ಪಾಕಿಸ್ತಾನದಲ್ಲಿ ತಾಲಿಬಾನ್ ಸುರಕ್ಷಿತ ತಾಣಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಸುರಕ್ಷಿತ ತಾಣಗಳು ಎಲ್ಲಿವೆ? ಪಾಕಿಸ್ತಾನದಲ್ಲಿ ಮೂರು ದಶಲಕ್ಷ ನಿರಾಶ್ರಿತರು ಇದ್ದಾರೆ, ಅವರು ತಾಲಿಬಾನ್‌ನಂತೆಯೇ ಒಂದೇ ಜನಾಂಗದವರಾಗಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.