ಕಾಬೂಲ್ :ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರಿಕೆಟ್ ಸೇರಿದಂತೆ ಯಾವುದೇ ಕ್ರೀಡೆಗಳನ್ನು ಆಡಲು ಅವಕಾಶವಿಲ್ಲ ಎಂದು ತಾಲಿಬಾನ್ ಬುಧವಾರ ಕಟ್ಟಪ್ಪಣೆ ಹೊರಡಿಸಿದೆ. ಈ ಕ್ರಮವು ನವೆಂಬರ್‌ನಲ್ಲಿ ಹೋಬರ್ಟ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ನಡುವಿನ ಪುರುಷರ ಟೆಸ್ಟ್ ಪಂದ್ಯದ ಬಗ್ಗೆ ಆತಂಕ ಉಂಟು ಮಾಡಿದೆ.
"ನಾನು ಮಹಿಳೆಯರು ಕ್ರಿಕೆಟ್ ಆಡಲು ಅವಕಾಶ ನೀಡುವುದಿಲ್ಲ ಎಂದು ಭಾವಿಸುತ್ತೇನೆ. ಯಾಕೆಂದರೆ, ಮಹಿಳೆಯರು ಕ್ರಿಕೆಟ್ ಆಡುವುದು ಅನಿವಾರ್ಯವಲ್ಲ. ಕ್ರಿಕೆಟ್ನಲ್ಲಿ ಅವರು ಮುಖ ಮತ್ತು ದೇಹವನ್ನು ಮುಚ್ಚಿಕೊಳ್ಳದಂತಹ ಪರಿಸ್ಥಿತಿ ಎದುರಿಸಬಹುದು. ಇಸ್ಲಾಂ ಮಹಿಳೆಯರನ್ನು ನೋಡಲು ಅನುಮತಿಸುವುದಿಲ್ಲ.
ಇದು ಮಾಧ್ಯಮ ಯುಗ. ಫೋಟೋಗಳು ಮತ್ತು ವಿಡಿಯೋಗಳು ಇರುತ್ತವೆ. ನಂತರ ಜನರು ಇದನ್ನು ವೀಕ್ಷಿಸುತ್ತಾರೆ" ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದರು.
"ಇಸ್ಲಾಂ ಮತ್ತು ಇಸ್ಲಾಮಿಕ್ ಎಮಿರೇಟ್ ಮಹಿಳೆಯರಿಗೆ ಕ್ರಿಕೆಟ್ ಆಡಲು ಅಥವಾ ಅವರನ್ನು ಬಹಿರಂಗಪಡಿಸುವ ರೀತಿಯ ಕ್ರೀಡೆಗಳನ್ನು ಆಡಲು ಅನುಮತಿಸುವುದಿಲ್ಲ" ಎಂದು ತಾಲಿಬಾನ್ ಸಾಂಸ್ಕೃತಿಕ ಆಯೋಗದ ಉಪ ಮುಖ್ಯಸ್ಥ ಅಹ್ಮದುಲ್ಲಾ ವಾಸಿಕ್ ಹೇಳಿದರು.