ನವದೆಹಲಿ:ಹಿಜಾಬ್ ವಿವಾದ ರಾಜ್ಯ, ದೇಶದ ಗಡಿ ದಾಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈಗ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮದ್ ಖುರೇಷಿ ಈ ವಿವಾದದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಮುಸ್ಲಿಂ ಹೆಣ್ಣುಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುವುದು ಮೂಲಭೂತ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಯಾರಿಗಾದರೂ ಈ ಮೂಲಭೂತ ಹಕ್ಕನ್ನು ನಿರಾಕರಿಸುವುದು ಮತ್ತು ಹಿಜಾಬ್ ಧರಿಸಿದ್ದಕ್ಕಾಗಿ ಅವರನ್ನು ಭಯಪಡಿಸುವುದು ದಬ್ಬಾಳಿಕೆಯಾಗಿದೆ. ಇದು ಮುಸ್ಲಿಮರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸುವ ಭಾರತದ ಯೋಜನೆಯ ಒಂದು ಭಾಗ ಎಂದು ಜಗತ್ತು ಅರಿತುಕೊಳ್ಳಬೇಕು ಎಂದು ಟೀಕಿಸಿದ್ದಾರೆ.