ಇಸ್ಲಾಮಾಬಾದ್:ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ಎರಡು ಪ್ರಯಾಣಿಕರ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 30 ಜನರು ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ.
ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯ ಧಾರ್ಕಿ ನಗರದ ಬಳಿ ಅಪಘಾತ ಸಂಭವಿಸಿದೆ. ಲಾಹೋರ್‌ನಿಂದ ಕರಾಚಿಗೆ ಹೋಗುತ್ತಿದ್ದ ಸರ್ ಸೈಯದ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಸರ್ಗೋಧಾದಿಂ ಹೊರಟಿದ್ದ ಮಿಲ್ಲಾಟ್ ಎಕ್ಸ್‌ಪ್ರೆಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಮಿಲ್ಲಾಟ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಪಲ್ಟಿಯಾಗಿವೆ.