ನವದೆಹಲಿ: ದೇಶವನ್ನು ತಾಲಿಬಾನ್ ತನ್ನ ತೆಕ್ಕೆಗೆ ತೆಗೆದುಕೊಂಡ ನಂತ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಅಶ್ರಫ್ ಘನಿ ದೇಶದಿಂದ ಪಲಾಯನ ಮಾಡಬೇಕಾಯ್ತು. ಇದೀಗ ಘನಿ ಹಾಗೂ ಅವರ ಕುಟುಂಬವನ್ನು ತಮ್ಮ ದೇಶಕ್ಕೆ ಸ್ವಾಗತಿಸಿರುವ ಯುನೈಟೆಡ್ ಅರಬ್ ಎಮಿರೇಟ್ಸ್,"ಮಾನವೀಯತೆಯ ನೆಲೆಗಟ್ಟಿನಲ್ಲಿ' ಘನಿ ಕುಟುಂಬಕ್ಕೆ ಆಶ್ರಯ ನೀಡುತ್ತಿರುವುದಾಗಿ ತಿಳಿಸಿದೆ.
ಯುಎಇ ವಿದೇಶಾಂಗ ವ್ಯವಹಾರಗಳು ಮತ್ತು ಅಂತಾರಾಷ್ಟ್ರೀಯ ಸಹಕಾರ ಸಚಿವಾಲಯವು ಅಶ್ರಫ್ ಘನಿ ಮತ್ತು ಅವರ ಕುಟುಂಬವನ್ನು ಮಾನವೀಯ ನೆಲೆಯಲ್ಲಿ ದೇಶಕ್ಕೆ ಸ್ವಾಗತಿಸಿದೆ ಎಂದು ತನ್ನ ಸಂಕ್ಷಿಪ್ತ ಹೇಳಿಕೆಯಲ್ಲಿ ತಿಳಿಸಿದೆ. ಘನಿ ಭಾನುವಾರ ಅಫ್ಘಾನಿಸ್ತಾನದಿಂದ ಪಲಾಯನ ಮಾಡಿದರು.
ತಾವು ದೇಶಬಿಟ್ಟಿದ್ದರ ಕುರಿತು ಘನಿಫೇಸ್‌ಬುಕ್ ಪೋಸ್ಟ್‌ನಲ್ಲಿ ಈ ರೀತಿ ಬರೆದುಕೊಂಡಿದ್ದಾರೆ, "ತಾಲಿಬಾನ್‌ಗಳು ಗೆದ್ದಿದ್ದಾರೆ" ಮತ್ತು "ರಕ್ತಪಾತದ ಪ್ರವಾಹ"ವನ್ನು ತಪ್ಪಿಸಲು ತಾನುಪಲಾಯನ ಮಾಡಿದ್ದಾಗಿ ಹೇಳಿದ್ದಾರೆ. ಬುಧವಾರದವರೆಗೂ ಘನಿ ಎಲ್ಲಿದ್ದಾರೆ ಎಂಬುದು ತಿಳಿದಿರಲಿಲ್ಲ, ಅವರು ತಾಜಿಕ್ತಾನ್, ಉಜ್ಬೇಕಿಸ್ತಾನ್ ಅಥವಾ ಒಮಾನ್ ಗೆ ಪಲಾಯನ ಮಾಡಿದ್ದಾನೆ ಎಂದು ಊಹಿಸಲಾಗಿತ್ತು.