ಲಾಹೋರ್: ಉಗ್ರ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲೇಬೇಕೆಂಬ ಜಾಗತಿಕ ಒತ್ತಡಕ್ಕೆ ಮಣಿದ ಪಾಕಿಸ್ತಾನ, ಉಗ್ರ ಹಫೀಸ್ ಸೈಯದ್ ವಿರುದ್ಧ ಭಯೋತ್ಪಾದನೆಗೆ ಆರ್ಥಿಕ ಸಹಾಯ ಸಂಬಂಧ 23 ಪ್ರಕರಣಗಳನ್ನು ದಾಖಲಿಸಿದೆ.
26/11 ಮುಂಬೈ ದಾಳಿಯ ಮಾಸ್ಟರ್ಮೈಂಡ್ ಹಫೀಸ್ ಸೇರಿ ಆತನ 12 ಸಹಚರರ ವಿರುದ್ಧ 23 ಪ್ರಕರಣಗಳನ್ನು ದಾಖಲಿಸಿದೆ. ಜಮಾತ್ ಉದ್ ದವಾ (ಜೆಯುಡಿ) ಸಂಘಟನೆಯ ಮುಖ್ಯಸ್ಥ ಐದು ಟ್ರಸ್ಟ್ಗಳ ಮೂಲಕ ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ್ದಾಗಿ ಪಾಕಿಸ್ತಾನದ ಕೌಂಟರ್ ಟೆರರಿಸಂ ಡಿಪಾರ್ಟ್ಮೆಂಟ್ ಹೇಳಿದೆ.