ಇಸ್ರೇಲ್:16 ವರ್ಷದ ಬಾಲಕಿಯೋರ್ವಳ ಮೇಲೆ ರೆಡ್ ಸಿ ರೆಸಾರ್ಟ್ನಲ್ಲಿ ಸುಮಾರು 30 ಮಂದಿ ಅತ್ಯಾಚಾರವೆಸಗಿದ್ದಾರೆ ಎಂಬ ಮಾಹಿತಿ ಹೊರಬರುತ್ತಿದ್ದಂತೆ ಸಾವಿರಾರು ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿರುವ ಸುದ್ದಿ ವಿವಿಧ ಸುದ್ದಿವಾಹಿನಿಗಳಲ್ಲಿ ಪ್ರಕಟಗೊಂಡಿದೆ, ಕೃತ್ಯ ಎಸಗಲು 20ಕ್ಕೂ ಹೆಚ್ಚು ಜನರು ಕ್ಯೂನಲ್ಲಿ ನಿಂತಿದ್ದರು ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದ್ದು, ಇವರು ಬಾಲಕಿಯ ನಗ್ನ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ಕಳೆದ ವಾರವೇ ದೂರು ದಾಖಲು ಮಾಡಿದ್ದಳು ಎನ್ನಲಾಗಿದ್ದು, ಆದರೆ ಪೊಲೀಸರು ಇದರ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎಂದು ತಿಳಿದು ಬಂದಿದೆ.
ಅತ್ಯಾಚಾರ ಪ್ರಕರಣದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಪ್ರತಿಭಟನೆ ಭುಗಿಲೆದ್ದಿದೆ. ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ಅಲ್ಲಿನ ಪ್ರಧಾನಿ ಬೆಂಜಮಿನ್ ನೆತಾನ್ಯಹು, ಇದೊಂದು ಆಘಾತಕಾರಿ ಘಟನೆಯಾಗಿದೆ ಎಂದಿದ್ದಾರೆ. ಜತೆಗೆ ಎಲ್ಲ ಶಂಕಿತರ ಬಂಧನ ಮಾಡುವಂತೆ ಸೂಚನೆ ನೀಡಿದ್ದಾರೆ.