ಮೊಗಾಡಿಶು:ಸೊಮಾಲಿಯಾದ ರಾಜಧಾನಿ ಮೊಗಾಡಿಶುನಲ್ಲಿರುವ ಪೊಲೀಸ್ ಠಾಣೆಯನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಮಾಹಿತಿ, ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವಾಲಯ ತಿಳಿಸಿದೆ.
ಭಾನುವಾರ ಸಂಜೆ ಸ್ಫೋಟಕ ತುಂಬಿದ ವಾಹನವನ್ನು ಮೊಗಾಡಿಶುನ ವಾಬೆರಿ ಜಿಲ್ಲಾ ಪೊಲೀಸ್ ಠಾಣೆಯೆಡೆ ಓಡಿಸಲಾಗಿದೆ ಎಂದು ಸೊಮಾಲಿ ನ್ಯಾಷನಲ್ ಟೆಲಿವಿಷನ್ ವರದಿ ಮಾಡಿದೆ. ದಾಳಿಯಲ್ಲಿ ಇನ್ನೂ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಯಾವುದೇ ಸಂಘಟನೆ ಈವರೆಗೆ ಕೃತ್ಯದ ಹೊಣೆ ಹೊತ್ತಿಲ್ಲ.