ರೋಮ್(ಇಟಲಿ):ಅಫ್ಘಾನಿಸ್ತಾನದ ಪರಿಸ್ಥಿತಿಯನ್ನು ಪ್ರತ್ಯೇಕವಾಗಿ ನೋಡಲಾಗುವುದಿಲ್ಲ. ಯುದ್ಧ ಪೀಡಿತ ದೇಶದಿಂದ ಬರುವ ಯಾವುದೇ ರೀತಿಯ ಬೆದರಿಕೆ ವಿರುದ್ಧ ಅಂತಾರಾಷ್ಟ್ರೀಯ ಸಮುದಾಯವು ಬಹಳ ಎಚ್ಚರಿಕೆಯಿಂದ ಗಮನಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಜಿ 20 ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟಲಿಗೆ ಭೇಟಿ ನೀಡಿದ್ದಾರೆ. ಅವರು, ಇಟಲಿಯ ಮಾರಿಯೋ ದ್ರಾಘಿ ಜತೆ ಅಫ್ಘಾನಿಸ್ತಾನದ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಅಫ್ಘಾನಿಸ್ತಾನದಲ್ಲಿನ ಸಮಸ್ಯೆಗಳಿಗೆ ಮೂಲ ಕಾರಣ ಮೂಲಭೂತವಾದ, ಉಗ್ರವಾದ, ಭಯೋತ್ಪಾದನೆ.