ಮ್ಯೂನಿಚ್: ರಷ್ಯಾದಿಂದ ಹೊರಬರುತ್ತಿರುವ ಪ್ರತಿಕ್ರಿಯೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ರೆ ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿ ಮಾಡಲು ಯೋಜನೆ ಸಿದ್ಧವಾಗಿದೆ ಎಂಬುದು ಗೊತ್ತಾಗುತ್ತದೆ ಎಂದು ನ್ಯಾಟೋ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಶನಿವಾರ ಹೇಳಿದ್ದಾರೆ.
ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ದಾಳಿಗೆ ರಷ್ಯಾ ಸಿದ್ಧವಾಗಿದೆ: ನ್ಯಾಟೋ
ಉಕ್ರೇನ್ ವಿರುದ್ಧ ರಷ್ಯಾ ಪೂರ್ಣ ಪ್ರಮಾಣದ ದಾಳಿ ನಡೆಸಲು ಯೋಜಿಸುತ್ತಿದೆ ಎಂಬ ಕುರಿತು ಕೆಲವು ಸೂಚನೆಗಳಿಂದ ತಿಳಿದು ಬಂದಿದೆ ಎಂದು ಮ್ಯೂನಿಚ್ ಭದ್ರತಾ ಸಮ್ಮೇಳನದ ವೇಳೆ ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ತಿಳಿಸಿದರು.
ಉಕ್ರೇನ್ನಲ್ಲಿ ಆಗುತ್ತಿರುವ ಬೆಳವಣಿಗೆಗಳು ಮತ್ತಷ್ಟು ಉದ್ವಿಗ್ನತೆಯನ್ನು ಹೆಚ್ಚಿಸಿವೆ. ಉಕ್ರೇನ್ ವಿರುದ್ಧ ರಷ್ಯಾ ಪೂರ್ಣ ಪ್ರಮಾಣದ ದಾಳಿಯನ್ನು ಯೋಜಿಸುತ್ತಿದೆ ಎಂಬ ಕುರಿತು ಕೆಲವು ಸೂಚನೆಗಳು ತಿಳಿಸಿವೆ ಎಂದು ಅವರು ತಿಳಿಸಿದರು.
ಕಳೆದ ಎರಡು ದಿನಗಳ ಹಿಂದೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಕೂಡ ಉಕ್ರೇನ್‌ನ ಮೇಲೆ ರಷ್ಯಾ ದಾಳಿ ಮಾಡಲು ನಿರ್ಧರಿಸಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಮುಂಬರುವ ದಿನಗಳಲ್ಲಿ ರಷ್ಯಾ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಸಂಭವವಿದೆ. ಈಗಾಗಲೇ ಪುಟಿನ್ ಸೇನಾ ಕಸರತ್ತು ನಡೆಸಲು ಸೂಚನೆ ನೀಡಿದ್ದಾರೆ. ಒಂದು ವೇಳೆ ರಷ್ಯಾ ಆಕ್ರಮಣ ಮಾಡಿದ್ರೆ ಅದರ ವಿರುದ್ಧ ಬೃಹತ್ ಆರ್ಥಿಕ ಮತ್ತು ರಾಜತಾಂತ್ರಿಕ ನಿರ್ಬಂಧಗಳನ್ನು ಹೇರುವುದಾಗಿ ಅವರು ಎಚ್ಚರಿಸಿದ್ದರು.