ಬ್ರಿಟನ್:ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಆರೋಗ್ಯ ಸ್ಥಿತಿ ವಿಷಮ ಪರಿಸ್ಥಿತಿ ತಲುಪಿದ್ದು, ಕೊರೊನಾ ವೈರಸ್ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ.
ವೈದ್ಯರ ಸಲಹೆ ಮೇರೆಗೆ ಅವರನ್ನು ತುರ್ತು ನಿಗಾ ಘಟಕಕ್ಕೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೆಂಟಿಲೇಟರ್ ಮೂಲಕ ಆಮ್ಲಜನಕ ಒದಗಿಸಲಾಗುತ್ತಿದೆ.