ಲಂಡನ್:ಒಮಿಕ್ರಾನ್ ಭೀತಿ ನಡುವೆ ಕೂಡ ಬ್ರಿಟನ್ನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗ್ತಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ 93 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣಗಳು ದಾಖಲಾಗಿವೆ.
ನಿನ್ನೆ 88 ಸಾವಿರ ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದವು. ಆದರೆ, ಇದು 93 ಸಾವಿರಕ್ಕೂ ಅಧಿಕ ಹೊಸ ಸೋಂಕು ಕಾಣಿಸಿಕೊಂಡಿರುವ ಕಾರಣ ಮೂರನೇ ಅಲೆಯ ಭೀತಿ ಎದುರಾಗಿದೆ. ಸದ್ಯ ಯುಕೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳ ಸಂಖ್ಯೆ 11.1 ಮಿಲಿಯನ್ಗೂ ಅಧಿಕವಾಗಿದ್ದು, 24 ಗಂಟೆಯಲ್ಲಿ 111 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ಸೋಂಕಿನಿಂದ ಇಲ್ಲಿಯವರೆಗೆ 1,47,000 ಜನರು ಸಾವನ್ನಪ್ಪಿದಂತಾಗಿದೆ.