ಜಿನೀವಾ:ಸದ್ಯಕ್ಕೆ ಕೊರೊನಾ ಸೋಂಕಿನ ಪ್ರಭಾವ ಮುಗಿಯುವುದಿಲ್ಲ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿರುವ ವೀಶ್ವ ಆರೋಗ್ಯ ಸಂಸ್ಥೆ, ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದಿದೆ.
ಈ ಬಗ್ಗೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೋಸ್ ಅಧಾನೊಮ್ ಘೆಬ್ರೆಯೆಸಸ್, ಆಫ್ರಿಕಾ, ಪೂರ್ವ ಯುರೋಪ್, ಲ್ಯಾಟಿನ್ ಅಮೆರಿಕ ಮತ್ತು ಕೆಲವು ಏಷ್ಯಾ ದೇಶಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ಸಾಮರ್ಥ್ಯ ಕಡಿಮೆ ಇರುವ ಕಾರಣ ಈ ಪ್ರದೇಶಗಳ ಅನೇಕ ದೇಶಗಳಲ್ಲಿ ವಾಸ್ತವಿಕ ಸೋಂಕಿತ ಪ್ರಕರಣ ಮತ್ತು ಸಾವುಗಳ ನಿಖರ ವರದಿ ಸಿಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.