ಮಾಸ್ಕೋ: ಭಾರತ-ಚೀನಾ ನಡುವೆ ಪೂರ್ವ ಲಡಾಖ್ನಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ನಡುವೆ ಇಂದು ಮಾಸ್ಕೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾದ ರಕ್ಷಣಾ ಸಚಿವ ವೀ ಫೆಂಗೆ ಅವರ ನಡುವೆ ಮಹತ್ವದ ಮಾತುಕತೆ ನಡೆಯಿತು.
ಶಾಂಘೈ ಸಹಕಾರ ಸಂಸ್ಥೆಯ(ಎಸ್ಸಿಒ) ರಕ್ಷಣಾ ಸಚಿವರ ಸಭೆಯಲ್ಲಿ ಪಾಲ್ಗೊಳ್ಳಲು ಉಭಯ ದೇಶಗಳ ರಕ್ಷಣಾ ಸಚಿವರು ಮಾಸ್ಕೋಗೆ ತೆರಳಿದ್ದು, ಈ ವೇಳೆ ಮಹತ್ವದ ಮಾತುಕತೆ ನಡೆದಿದೆ. ಭಾರತದ ರಕ್ಷಣಾ ಸಚಿವರೊಂದಿಗೆ ಮಾತುಕತೆ ನಡೆಸಬೇಕೆಂದು ಚೀನಾದ ರಕ್ಷಣಾ ಸಚಿವರು ಮನವಿ ಮಾಡಿಕೊಂಡಿದ್ದಾಗಿ ತಿಳಿದು ಬಂದಿತ್ತು. ಹೀಗಾಗಿ ಉಭಯ ಸಚಿವರ ನಡುವೆ ಈ ಸಭೆ ನಡೆದಿದೆ.