ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಮಾಣು ದಾಳಿ ಬೆದರಿಕೆಯ ಬಳಿಕ ಉಕ್ರೇನ್ ಶಾಂತಿ ಮಾತುಕತೆಗೆ ಒಪ್ಪಿಗೆ ನೀಡಿದ್ದು, ಬೆಲಾರಸ್ ಗಡಿಯಲ್ಲಿ ಉಭಯ ರಾಷ್ಟ್ರಗಳ ನಿಯೋಗ ಮಾತುಕತೆಗೆ ಮುಂದಾಗಲಿವೆ. ಸಂಧಾನಕ್ಕೆ ಅಗತ್ಯ ಸಿದ್ಧತೆ ಮಾಡಲಾಗಿದೆ. ನಿಯೋಗಗಳ ಆಗಮನಕ್ಕೆ ಕಾದಿದ್ದೇವೆ ಎಂದು ಬೆಲಾರಸ್ ಸರ್ಕಾರ ತಿಳಿಸಿದೆ.
ರಷ್ಯಾ-ಉಕ್ರೇನ್ ಮಧ್ಯೆ ಯುದ್ಧ ಸಂಧಾನ ನಡೆಸಲು ಎಲ್ಲವೂ ಸಿದ್ಧವಾಗಿದೆ. ಉಭಯ ರಾಷ್ಟ್ರಗಳ ನಿಯೋಗಗಳ ಬರುವಿಕೆಗಾಗಿ ಕಾಯಲಾಗುತ್ತಿದೆ ಎಂದು ಬೆಲಾರಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.