ಪ್ಯಾರಿಸ್/ನವದೆಹಲಿ:ಪಾಕಿಸ್ತಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಮುಜುಗರಕ್ಕೀಡಾಗಿದೆ. ಅಂತಾರಾಷ್ಟ್ರೀಯ ಸಂಸ್ಥೆ ಎಫ್ಎಟಿಎಫ್(ಹಣಕಾಸು ಕ್ರಿಯಾ ಕಾರ್ಯಪಡೆ) ಪಾಕಿಸ್ತಾನವನ್ನು 'ಬ್ಲ್ಯಾಕ್ ಲಿಸ್ಟ್'ಗೆ ಸೇರಿಸುವ ಸಾಧ್ಯತೆ ದಟ್ಟವಾಗಿದ್ದು, ಈ ಬಗ್ಗೆ ಪ್ಯಾರಿಸ್ನಲ್ಲಿ ಎಫ್ಎಟಿಎಫ್ ಸದಸ್ಯ ರಾಷ್ಟ್ರಗಳ ಸಭೆಯಲ್ಲಿ ಮಾತುಕತೆ ನಡೆಸಲಾಗಿದೆ ಎಂದು ಹೇಳಲಾಗ್ತಿದೆ.
ಎಫ್ಎಟಿಫ್(Financial Action Task Force) ಕೇಂದ್ರ ಕಚೇರಿ ಪ್ಯಾರಿಸ್ನಲ್ಲಿ ಭಾನುವಾರದಿಂದ ನಡೆಯುತ್ತಿರುವ ಸಭೆಯಲ್ಲಿ ಈ ಕುರಿತು ಮಾತುಕತೆ ನಡೆದಿದೆ ಎನ್ನಲಾಗ್ತಿದ್ದು, ಇದರಿಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್ಗೆ ಮತ್ತೆ ಸಂಕಷ್ಟ ಎದುರಾಗಲಿದೆ.
ಪಾಕಿಸ್ತಾನ ಉಗ್ರರನ್ನು ಪೋಷಿಸುತ್ತಿದೆ ಎಂದು ಭಾರತವು ಹಲವು ಬಾರಿ ನೇರ ಆರೋಪ ಮಾಡಿದೆ. ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲೂ ಪ್ರತಿ ಬಾರಿ ಈ ಬಗ್ಗೆ ಭಾರತ ನೇರವಾಗಿಯೇ ಪಾಕಿಸ್ತಾನದತ್ತ ಬೊಟ್ಟು ಮಾಡಿ ತೋರಿಸಿದೆ. ಇದರಿಂದಲೇ ಪಾಕ್ಗೆ ಜಾಗತಿಕ ಮಟ್ಟದಲ್ಲಿ ಮುಜುಗರವುಂಟಾಗಿತ್ತು. ಇನ್ನೊಂದೆಡೆ ಉಗ್ರರಿಗೆ ಪಾಕಿಸ್ತಾನ ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿದೆ ಮತ್ತು ಉಗ್ರರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಜಾಗತಿಕ ಕಾವಲುಪಡೆ (ಅಂತಾರಾಷ್ಟ್ರೀಯ ಶಾಂತಿ ಸಂಸ್ಥೆ)ಯೂ ಹೇಳಿದೆ. ಹೀಗಾಗಿ ಪಾಕ್ ವಿರುದ್ಧ ಜಾಗತಿಕ ಸಂಸ್ಥೆಯಾದ ಹಣಕಾಸು ಕ್ರಿಯಾ ಕಾರ್ಯಪಡೆಯೂ ಈ ಗಟ್ಟಿ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಎಫ್ಎಟಿಎಫ್(Financial Action Task Force) ಅಂದರೆ ಏನು!