ಫ್ರೆಂಚ್: ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಫ್ರಾನ್ಸ್ನ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಖೋಜಿ ಹಾಗೂ ಆತನ ಇಬ್ಬರು ಸಹಾಯಕರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಅಲ್ಲಿನ ಕೋರ್ಟ್ ಮಹತ್ವದ ಆದೇಶ ಹೊರಹಾಕಿದೆ. ಒಂದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ವರ್ಷಗಳ ಕಾಲ ಅಮಾನತು ಶಿಕ್ಷೆ ನೀಡಲಾಗಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದ್ದು, ಅಧ್ಯಕ್ಷೀಯ ಚುನಾವಣೆ ವೇಳೆ ಲಿಬಿಯಾದಿಂದ ಅಕ್ರಮವಾಗಿ ಹಣ ಪಡೆದುಕೊಂಡಿರುವ ಆರೋಪ ಇವರ ಮೇಲಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರಲ್ಲಿ ಇವರ ಬಂಧನ ಮಾಡಲಾಗಿತ್ತು.