ಕರ್ನಾಟಕ

karnataka

ETV Bharat / international

ಭಾರತ - ಪಾಕ್​ ಹದಗೆಟ್ಟ ಸಂಬಂಧ.. ಟೆನ್ಷನ್​ ಕಡಿಮೆ ಮಾಡಲು ಫ್ರಾನ್ಸ್​​​​ ಎಂಟ್ರಿ

ಕಾಶ್ಮೀರ ಸಮಸ್ಯೆಗೆ ಸಂಬಂಧಿಸಿದಂತೆ ಫ್ರೆಂಚ್​ ವಿದೇಶಾಂಗ ಸಚಿವ ಜೀನ್​ ಯೆವೀಸ್​​ ಲೆ ಡೆರೆನ್ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಅವರಿಗೆ ಫೋನ್​ ಕರೆ ಮಾಡಿ ಮಾತನಾಡಿದ್ದಾರೆ.

ಫ್ರಾನ್ಸ್

By

Published : Aug 21, 2019, 11:05 AM IST

ಪ್ಯಾರಿಸ್​: ಭಾರತ ಸರ್ಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ, ಸಂವಿಧಾನದ 370 ನೇ ವಿಧಿ ಹಾಗೂ ಆರ್ಟಿಕಲ್​ 35 ಅನ್ನು ರದ್ದು ಮಾಡಿ ಐತಿಹಾಸಿಕ ನಿರ್ಧಾರ ಕೈಗೊಂಡಿತ್ತು.

ಈ ಹಿನ್ನೆಲೆಯಲ್ಲಿ ಜಮ್ಮು- ಕಾಶ್ಮೀರ ಹಾಗೂ ಲಡಾಖ್​ ಕೇಂದ್ರಾಡಳಿತ ಪ್ರದೇಶಗಳಾಗಿದ್ದವು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ನಿರ್ಧಾರ ಪಾಕಿಸ್ತಾನದ ಕಸಿವಿಸಿಗೆ ಕಾರಣವಾಗಿದೆ. ಇದರಿಂದಾಗಿ ಪಾಕಿಸ್ತಾನ ಭಾರತದೊಂದಿಗೆ ವಾಣಿಜ್ಯ ವ್ಯವಹಾರ ಸೇರಿದಂತೆ ರಾಜತಾಂತ್ರಿಕ ಸಂಬಂಧಗಳನ್ನು ಕಡಿತ ಮಾಡಿದೆ.

ಇನ್ನೊಂದೆಡೆ ಗಡಿಯಲ್ಲಿ ಯುದ್ಧದ ವಾತಾವರಣವೂ ನಿರ್ಮಾಣವಾಗಿದ್ದು, ಜಮ್ಮು- ಕಾಶ್ಮೀರ ವಿಷಯವನ್ನ ಅಂತಾರಾಷ್ಟ್ರೀಯ ಸಮುದಾಯದೆದುರು ಕೊಂಡೊಯ್ಯುವ ಯತ್ನವನ್ನ ಪಾಕಿಸ್ತಾನ ಮಾಡಿ ಮುಖಭಂಗವನ್ನು ಎದುರಿಸಿದೆ.

ಕಾಶ್ಮೀರ ಸಮಸ್ಯೆ ಇತ್ಯರ್ಥ ಮಾಡಲು ಮಧ್ಯಸ್ಥಿಕೆಗೆ ಸಿದ್ಧ: ಟ್ರಂಪ್ ಪುನರುಚ್ಚಾರ

ಇದೀಗ ಎರಡೂ ರಾಷ್ಟ್ರಗಳ ನಡುವೆ ಉಂಟಾಗಿರುವ ವೈಷಮ್ಯ ಕಡಿಮೆ ಮಾಡಲು ಅಂತಾರಾಷ್ಟ್ರೀಯ ಸಮುದಾಯ ಕಾರ್ಯಪ್ರವೃತ್ತವಾಗಿದೆ. ಇದೀಗ ಫ್ರಾನ್ಸ್​​ ಸಹ ಈ ಸಂಬಂಧ ಪಾಕಿಸ್ತಾನದ ವಿದೇಶಾಂಗ ಸಚಿವ ಶಾ ಮೊಹಮ್ಮದ್​ ಖುರೇಷಿ ಅವರಿಗೆ ಫೋನ್​ ಕರೆ ಮಾಡಿ ಮಾತನಾಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಯೂರೋಪ್​ ವ್ಯವಹಾರಗಳ ಮೇಲಿನ ಫ್ರೆಂಚ್​ ವಿದೇಶಾಂಗ ಸಚಿವ ಜೀನ್​ ಯೆವೀಸ್​​ ಲೆ ಡೆರೆನ್​​, ಎರಡೂ ರಾಷ್ಟ್ರಗಳು ದ್ವಿಪಕ್ಷೀಯ ಸಂಬಂಧಗಳನ್ನು ಮರು ಸ್ಥಾಪಿಸಿ ಶಾಂತಿಯುತವಾಗಿ ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಮೊನ್ನೆಯಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪಾಕಿಸ್ತಾನ ಪ್ರಧಾನಿ ಇಮ್ರಾನ್​ ಖಾನ್ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದರು.

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದತಿ: ಅಂತಾರಾಷ್ಟ್ರೀಯ ಕೋರ್ಟ್‌ಗೆ ಪಾಕ್‌ ಮೊರೆ

ಇದೇ ವೇಳೆ, ಎರಡೂ ರಾಷ್ಟ್ರಗಳ ನಡುವಣ ಸಮಸ್ಯೆ ಬಗೆ ಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಇರುವುದಾಗಿ ಆ ಬಳಿಕ ಹೇಳಿಕೆಯನ್ನೂ ನೀಡಿದ್ದರು. ಈ ಮೊದಲೇ ಭಾರತ ಕಾಶ್ಮೀರ ವಿಷಯದಲ್ಲಿ ಮೂರನೇ ರಾಷ್ಟ್ರದ ಮಧ್ಯಸ್ಥಿಕೆಗೆ ಭಾರತ ಸ್ಪಷ್ಟವಾಗಿ ನಿರಾಕರಿಸಿದೆ.

ABOUT THE AUTHOR

...view details