ಚಾಂಟಿಲಿ(ಫ್ರಾನ್ಸ್):ಪ್ರಸ್ತುತ ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಫ್ರಾನ್ಸ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದು, ಈ ವೇಳೆ ಕಾಶ್ಮೀರ ವಿಚಾರವೂ ಪ್ರಸ್ತಾಪವಾಗಿದೆ.
ಸದ್ಯ ಭಾರತ ಹಾಗೂ ಪಾಕಿಸ್ತಾನ ದೇಶಗಳ ನಡುವೆ ಮತ್ತಷ್ಟು ಬಿಕ್ಕಟ್ಟಿಗೆ ಕಾರಣವಾಗಿರುವ ಕಾಶ್ಮೀರ ಸಮಸ್ಯೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಲ್ ಮಾಕ್ರೋನ್, ಕಾಶ್ಮೀರ ಸಮಸ್ಯೆಯನ್ನು ಅದಕ್ಕೆ ಸಂಬಂಧಿಸಿದ ಎರಡು ದೇಶಗಳು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಈ ವಿಚಾರದಲ್ಲಿ ಮೂರನೇಯವರ ಮಧ್ಯಪ್ರವೇಶ ಉಚಿತವಲ್ಲ ಎಂದಿದ್ದಾರೆ.