ಕರ್ನಾಟಕ

karnataka

ETV Bharat / international

ಇಂಜಿನಿಯರಿಂಗ್ ಕಾರ್ಖಾನೆಯಲ್ಲಿ ಸ್ಫೋಟ: ಐವರ ಸಾವು, ಮೂವರಿಗೆ ಗಾಯ - ಎಂಜಿನಿಯರಿಂಗ್ ಕಾರ್ಖಾನೆಯಲ್ಲಿ ಗ್ಯಾಸ್​ ಸ್ಫೋಟ

ರಷ್ಯಾದ ಮಧ್ಯ ಓರಿಯೋಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಎಂಜಿನಿಯರಿಂಗ್ ಕಾರ್ಖಾನೆಯಲ್ಲಿ ಸ್ಫೋಟ, Gas explosion at a Russian engineering factory kills 5
ಎಂಜಿನಿಯರಿಂಗ್ ಕಾರ್ಖಾನೆಯಲ್ಲಿ ಸ್ಫೋಟ

By

Published : Jan 31, 2020, 4:18 PM IST

ಮಾಸ್ಕೋ: ರಷ್ಯಾದ ಇಂಜಿನಿಯರಿಂಗ್ ಕಾರ್ಖಾನೆಯಲ್ಲಿ ಗ್ಯಾಸ್​ ಸ್ಫೋಟಗೊಂಡು ಐದು ಮಂದಿ ಸಾವನ್ನಪ್ಪಿದ್ದಾರೆ.

ರಷ್ಯಾದ ಮಧ್ಯ ಓರಿಯೊಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಸ್ಫೋಟದ ಪರಿಣಾಮ ನಿರ್ಮಾಣ ಹಂತದಲ್ಲಿದ್ದ ಇಂಜಿನಿಯರಿಂಗ್ ಉತ್ಪಾದನಾ ಸೌಲಭ್ಯದ ಕಟ್ಟಡ ಕುಸಿದಿದೆ. ಸ್ಫೋಟಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.

ಗಾಯಗೊಂಡ ಮೂವರು ಟರ್ಕಿಯ ಪ್ರಜೆಗಳು ಎಂದು ಅಲ್ಲಿನ ಮಾಧ್ಯಮ ವರದಿ ಮಾಡಿದೆ. ಸ್ಥಳೀಯ ಪೊಲೀಸರು ದೂರು ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.

ABOUT THE AUTHOR

...view details