ವಾಷಿಂಗ್ಟನ್:ಉಕ್ರೇನ್ ಮೇಲೆ ರಷ್ಯಾ ಆಕ್ರಮಣವನ್ನು ಶಿಕ್ಷಿಸುವ ಪಾಶ್ಚಿಮಾತ್ಯ ನಿರ್ಬಂಧಗಳ ಬಗ್ಗೆ ಭಾರತವು 'ಸ್ವಲ್ಪ ಅಲುಗಾಡಿದೆ' ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಸೋಮವಾರ ನಡೆದ ಬ್ಯುಸಿನೆಸ್ ರೌಂಡ್‌ಟೇಬಲ್‌ನ ಸಿಇಒ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಆಕ್ರಮಣಕಾರಿ ನೀತಿಯನ್ನು ಅನುಸರಿಸುತ್ತಿರುವ ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಪ್ರತ್ಯೇಕಿಸಲು ಕ್ವಾಡ್‌ನಲ್ಲಿರುವ ಭಾರತ ಸ್ವಲ್ಪ ಮಟ್ಟಿಗೆ ಅಲುಗಾಡುತ್ತಿದೆ. ಆದರೆ, ಪುಟಿನ್ ಅವರ ಆಕ್ರಮಣಶೀಲತೆ ನಿಭಾಯಿಸುವ ವಿಷಯದಲ್ಲಿ ಜಪಾನ್, ಆಸ್ಟ್ರೇಲಿಯಾ ಅತ್ಯಂತ ಪ್ರಬಲವಾಗಿದೆ ಎಂದು ಹೇಳಿದ್ದಾರೆ.
ಈ ತಿಂಗಳ ಆರಂಭದಲ್ಲಿ ನಡೆದ ವರ್ಚುಯಲ್ ಕ್ವಾಡ್ ಸಮ್ಮೇಳನದಲ್ಲಿ ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ನಾಯಕರು ರಷ್ಯಾದ ಆಕ್ರಮಣವನ್ನು ಖಂಡಿಸಿದ್ದರು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಮಾತುಕತೆ ಮತ್ತು ರಾಜತಾಂತ್ರಿಕತೆಯ ಹಾದಿಗೆ ಮರಳುವ ಅಗತ್ಯವನ್ನು ಪುನರುಚ್ಚರಿಸಿದ್ದರು.