ಲಂಡನ್: ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಈ ತಿಂಗಳ ಅಂತ್ಯದಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA) ಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಈ ಸಭೆಯು ಶ್ವೇತ ಭವನದಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
76 ನೇ ವಿಶ್ವಸಂಸ್ಥೆಯ ಸಾಮಾನ್ಯ ಸಭೆ, ಸೆಪ್ಟೆಂಬರ್ 14 ರಂದು ಆರಂಭವಾಗುತ್ತಿದೆ. ಉನ್ನತ ಮಟ್ಟದ ಸಭೆಯು ಸೆಪ್ಟೆಂಬರ್ 21 ರಿಂದ 27 ರವರೆಗೆ ನಡೆಯಲಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಬೋರಿಸ್ ಜಾನ್ಸನ್ ನಾಲ್ಕು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಮಯದಲ್ಲಿ ಜಾನ್ಸನ್ ಮತ್ತು ಬೈಡನ್ ದ್ವಿಪಕ್ಷೀಯ ಸಭೆ ನಡೆಸುವ ಸಾಧ್ಯತೆಯಿದೆ.