ವೆಲ್ಲಿಂಗ್ಟನ್ (ನ್ಯೂಜಿಲೆಂಡ್):ಕೊರೊನಾ ರೂಪಾಂತರಿ ಓಮಿಕ್ರಾನ್ನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ನ್ಯೂಜಿಲೆಂಡ್ ಪ್ರಧಾನಿ ಜಸಿಂಡಾ ಅರ್ಡೆರ್ನ್ ತಮ್ಮ ಮದುವೆಯನ್ನು ರದ್ದುಗೊಳಿಸಿರುವುದಾಗಿ ಭಾನುವಾರ ತಿಳಿಸಿದ್ದಾರೆ.
ನನ್ನ ಮದುವೆಯೂ ಮುಂದಿನ ದಿನಗಳಲ್ಲಿ ನಡೆಯುವುದಿಲ್ಲ. ದೇಶದ ಇತರ ಪ್ರಜೆಗಳಂತೆ ನಾನೂ ಈ ಸಾಂಕ್ರಾಮಿಕದ ಪರಿಣಾಮವನ್ನು ಅನುಭವಿಸುತ್ತೇನೆ. ಸೋಂಕಿನಿಂದ ಹೆಚ್ಚು ಸಂಕಷ್ಟಕ್ಕೊಳಗಾದ ನ್ಯೂಜಿಲೆಂಡ್ನ ಸಾವಿರಾರು ಮಂದಿಯಲ್ಲಿ ನಾನೂ ಒಬ್ಬಳಾಗುತ್ತೇನೆ ಎಂದು ಅರ್ಡೆರ್ನ್ ಹೇಳಿದ್ದಾರೆ.
ಇದನ್ನೂ ಓದಿ: ಅಧ್ಯಕ್ಷ ಕ್ಸಿ ಜಿನ್ಪಿಂಗ್ ಕಠಿಣ ನೀತಿಗಳೇ ಚೀನಾದ ಆರ್ಥಿಕತೆಗೆ ಅಪಾಯ ತಂದೊಡ್ಡಲಿವೆ: ವರದಿ
ನ್ಯೂಜಿಲೆಂಡ್‌ನಲ್ಲಿ ಕೋವಿಡ್ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದ್ದು, ವಿವಾಹ ಸಮಾರಂಭಕ್ಕೆ ಪೂರ್ಣವಾಗಿ ಲಸಿಕೆ ಪಡೆದ 100 ಮಂದಿಗೆ ಭಾಗವಹಿಸಲು ಅವಕಾಶ ನೀಡಲಾಗಿದೆ. ಕೋವಿಡ್ ತಡೆಗಟ್ಟಲು ರೆಡ್ ಸೆಟ್ಟಿಂಗ್ ನಿರ್ಬಂಧಗಳನ್ನು ನ್ಯೂಜಿಲೆಂಡ್‌ನಲ್ಲಿ ಜಾರಿಗೊಳಿಸಲಾಗಿದ್ದು, ಇದು ಮುಂದಿನ ತಿಂಗಳ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ಹೀಗಾಗಿ ಪ್ರಧಾನಿ ತಮ್ಮ ಮದುವೆಯನ್ನು ರದ್ದುಗೊಳಿಸಿದ್ದಾರೆ ಎನ್ನಲಾಗ್ತಿದೆ.
ಎರಡನೇ ಕೋವಿಡ್-19 ಲಸಿಕೆ ಮತ್ತು ಬೂಸ್ಟರ್ ಡೋಸ್ ನಡುವಿನ ಅಂತರವನ್ನು ಆರು ತಿಂಗಳಿನಿಂದ ನಾಲ್ಕು ತಿಂಗಳಿಗೆ ಇಳಿಸಲಾಗಿದೆ. ವಿದೇಶದಿಂದ ಬರುವ ಪ್ರಯಾಣಿಕರಿಗೆ 7 ರಿಂದ 10 ದಿನಗಳ ಕ್ವಾರಂಟೈನ್ನನ್ನು ಕಡ್ಡಾಯಗೊಳಿಸಲಾಗಿದೆ. ಈ ನಿಯಮಗಳು ಸೇರಿದಂತೆ ಇತರ ಮುನ್ನೆಚ್ಚರಿಕೆ ಕ್ರಮಗಳಿಗೆ ನ್ಯೂಜಿಲೆಂಡ್ನ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ